ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇದಿಸುವಿಕೆ, ನಿವಾರಿಸುವಿಕೆ) 2013ರ ಕಾಯ್ದೆ
ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇದಿಸುವಿಕೆ, ನಿವಾರಿಸುವಿಕೆ) 2013 ರ ಅಧಿನಿಯಮವನ್ನು ದಿನಾಂಕ:09-12-2023 ರಂದು ಜಾರಿಗೆ ತರಲಾಗಿದೆ. ಮಹಿಳೆಯರಿಗೆ ಕೆಲಸದ ಸ್ಥಳದಲ್ಲಿ ಸುರಕ್ಷಿತ ವಾತಾವರಣವನ್ನು ಕಲ್ಪಿಸುವುದೇ ಈ ಕಾಯ್ದೆಯ ಮುಖ್ಯ ಉದ್ದೇಶವಾಗಿದೆ ಹಾಗೂ ಕಾಯ್ದೆಯ ನಿಯಮ(4) (1)ರಂತೆ ಯಾವುದೇ ಕಛೇರಿ ಅಥವಾ ಸಂಸ್ಥೆ ಕೆಲಸದ ಸ್ಥಳಗಳಲ್ಲಿ 10 ಮತ್ತು 10 ಕ್ಕಿಂತ ಹೆಚ್ಚು ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿದ್ದರೆ ಕೆಲಸದ ಸ್ಥಳ/ ಕಛೇರಿಯಲ್ಲಿ ಆಂತರಿಕ ದೂರು ನಿವಾರಣಾ ಸಮಿತಿಯನ್ನು ಕಡ್ಡಾಯವಾಗಿ ರಚನೆಯನ್ನು ಮಾಡಬೇಕಾಗಿದೆ.
ಕಾಯ್ದೆಯ ಸೆಕ್ಷ್ನನ (5) ರಲ್ಲಿ ಪ್ರತ್ಯಾಯೋಜಿಸಿದ ಅಧಿಕಾರ ಚಲಾಯಿಸಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳನ್ನು ಈ ಅಧಿನಿಯಮದ ಮೇರೆಗೆ ಅಧಿಕಾರವನ್ನು ಚಲಾಯಿಸಲು ಅಥವಾ ಪ್ರಕಾರ್ಯಗಳನ್ನು ನಿರ್ವಹಿಸಲು ಪ್ರತಿಯೊಂದು ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.
ಮುಂದುವರೆದು, ಜಿಲ್ಲಾ ಮಟ್ಟದಲ್ಲಿ ಸ್ವೀಕೃತ ದೂರುಗಳ ವಿಲೇವಾರಿಗಾಗಿ “ಸ್ಥಳೀಯ ದೂರು ನಿರ್ವಹಣಾ ಸಮಿತಿಯನ್ನು ರಚಿಸಲಾಗಿದೆ.ಹಾಗೂ ತಾಲ್ಲೂಕು ಮಟ್ಟದಲ್ಲಿ ನೋಡೆಲ್ ಅಧಿಕಾರಿಗಳನ್ನು ಸಹ ನೇಮಿಸಲಾಗಿದೆ”.