ಇತಿಹಾಸ
ಬೆಂಗಳೂರು ಕರ್ನಾಟಕ ರಾಜ್ಯದ ದೊಡ್ಡ ನಗರ ಮತ್ತು ರಾಜಧಾನಿ. ಬೆಂಗಳೂರು ನಗರವು ಕ್ರಿ.ಶ.1537ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ. ಭಾರತದ ೫ನೇ ದೊಡ್ಡ ಮಹಾನಗರವಾಗಿರುವ ಬೆಂಗಳೂರು ಅತೀ ಹೆಚ್ಚು ಜನಸಂಖ್ಯ್ಯೆ ಹೊಂದಿರುವ ನಗರಗಳಲ್ಲಿ ೩ನೇ ಸ್ಥಾನದಲ್ಲಿದೆ. ಜಗತ್ತಿನ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಮಹತ್ತರವಾದ ಕಾಣಿಕೆ ನೀಡುತ್ತಾ ಬಂದಿರುವ ಕಾರಣ ಬೆಂಗಳೂರು ವಿಶ್ವಾದ್ಯಂತ ಭಾರತದ ‘ಸಿಲಿಕಾನ್ ವ್ಯಾಲಿ’ ಎಂದೇ ಪ್ರಸಿದ್ಧ. ಸಮುದ್ರ ಮಟ್ಟದಿಂದ ಸುಮಾರು ೩೦೦೦ ಅಡಿ (೯೧೪.೪ ಮೀ)ಗಳಿಗಿಂತ ಎತ್ತರದಲ್ಲಿರುವ ಬೆಂಗಳೂರು ನಗರವು ವರ್ಷವಿಡೀ ಆಹ್ಲಾದಕರ ವಾತಾವರಣ ಹೊಂದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕೆರೆಗಳನ್ನು ಹೊಂದಿದೆ. ‘ಕಬ್ಬನ್ ಪಾರ್ಕ್’, ‘ಲಾಲ್ ಬಾಗ್’ಗಳಂತಹ ದೊಡ್ಡ ಉದ್ಯಾನವನಗಳನ್ನು ಹೊಂದಿರುವ ಈ ನಗರವು ‘ಉದ್ಯಾನ ನಗರಿ’ ಎಂದೂ ಪ್ರಸಿದ್ಧ. ವಿಶ್ವದ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಉದ್ಯಮಿಗಳ ಅಚ್ಚುಮೆಚ್ಚಿನ ೧೦ ನಗರಗಳಲ್ಲಿ ಬೆಂಗಳೂರು ಕೂಡ ಒಂದು.
ಇತಿಹಾಸ
ಕ್ರಿಸ್ತ ಶಕ ೧೫೩೭ರ ತನಕ ಬೆಂಗಳೂರು ದಕ್ಷಿಣ ಭಾರತದ ಸಂಸ್ಥಾನಗಳಾದ ಗಂಗ, ಚೋಳ ಮತ್ತು ಹೊಯ್ಸಳರ ಆಳ್ವಿಕೆಗೆ ಒಳಪಟ್ಟಿದೆ. ನಂತರ ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜ ಕೆಂಪೇಗೌಡರು ಬೆಂಗಳೂರಿನಲ್ಲಿ ಮಣ್ಣಿನ ಕೋಟೆ ಕಟ್ಟಿ ಆಧುನಿಕ ಬೆಂಗಳೂರಿನ ಉದಯಕ್ಕೆ ಕಾರಣಕರ್ತರಾದರು. ಮರಾಠರು ಮತ್ತು ಮುಘಲರ ಅಲ್ಪಾವಧಿ ಆಡಳಿತಕ್ಕೆ ಒಳಪಟ್ಟಿದ್ದ ಬೆಂಗಳೂರು, ಮೈಸೂರು ರಾಜರ ಆಧಿಪತ್ಯದಲ್ಲೇ ಉಳಿದಿತ್ತು. ನಂತರ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನರ ಆಡಳಿತಕ್ಕೆ ಒಳಪಟ್ಟ ಬೆಂಗಳೂರು, ನಾಲ್ಕನೇ ಆಂಗ್ಲೋ ಮೈಸೂರು ಯುದ್ಧ(೧೭೯೯)ದಲ್ಲಿ ಬ್ರಿಟೀಷರ ಪಾಲಾಯಿತು. ತದನಂತರ ಬ್ರಿಟೀಷರು ಮೈಸೂರು ಸಂಸ್ಥಾನವನ್ನು ತಮ್ಮ ಆಡಳಿತದ ಒಂದು ರಾಜ್ಯವನ್ನಾಗಿಸಿ, ಬೆಂಗಳೂರನ್ನು ಅದರ ರಾಜಧಾನಿಯಾಗಿ ಘೋಷಿಸಿ, ಮೈಸೂರು ಒಡೆಯರ ಆಡಳಿತಕ್ಕೊಪ್ಪಿಸಿದರು.
ಬೆಂಗಳೂರು ೧೫೩೭|೧೫೩೭ರಲ್ಲಿ ಕೆಂಪೇಗೌಡರ (೧೫೧೦ – ೧೫೭೦) ರಾಜಧಾನಿಯಾಗಿತ್ತು.ಈ ನಗರವನ್ನು ಕೆಂಪೇಗೌಡರು ನಿರ್ಮಿಸಿದರು. ಕೆಂಪೇಗೌಡ (೧೫೧೦-೧೫೭೦) ಈ ನಗರವನ್ನು “ಗಂಡು ಭೂಮಿ” ಮತ್ತು “ನಾಯಕರ ರಾಜ್ಯ” ಎಂದು ಹೇಳುತಿದ್ದರು.
ಹದಿನೆ೦ಟನೇ/ಹತ್ತೊ೦ಬತ್ತನೇ ಶತಮಾನದಲ್ಲಿ ಬೆಂಗಳೂರು ಒಂದು ನಗರವಾಗಿ ಬೆಳೆಯಿತು. ಆಗ ಪ್ರಮುಖವಾಗಿ ನಗರದಲ್ಲಿ ಎರಡು ಮುಖ್ಯ ರಸ್ತೆಗಳಿದ್ದವು. ಅವು “ಚಿಕ್ಕಪೇಟೆ” ಮತ್ತು “ದೊಡ್ಡಪೇಟೆ” ರಸ್ತೆಗಳು. ಸ್ವಾತಂತ್ರ್ಯಾನಂತರ ಬೆಂಗಳೂರು ಬಹು ದೊಡ್ಡ ಕೈಗಾರಿಕಾ ಉತ್ಪಾದನಾ ಕ್ಷೇತ್ರಗಳಿಗೆ ಮನೆಯಾಯಿತು. ಶಾಂತಿ ಸಮೃದ್ಧಿಯೂ, ಪರಿಸರ ಸಮೃದ್ಧಿಯೂ ಜನರನ್ನು ಈ ಊರಿನೆಡೆಗೆ ಆಕರ್ಷಿಸಿತು. ಹೆಚ್ ಎ ಎಲ್, ಬಿ ಇ ಎಲ್, ಐ ಟಿ ಐ, ಇಸ್ರೋ ನಂತಹ ಬಹು ದೊಡ್ಡ ಉತ್ಪಾದನಾ ಘಟಕಗಳಿಗೆ ಮನೆಯಾಯಿತು.
ಕೆಂಪೇಗೌಡರ ಮಗನಾದ ಕೆಂಪೇಗೌಡ-೨ ಅನೇಕ ದೇವಸ್ಥಾನ ಮತ್ತು ಗೋಪುರಗಳನ್ನು ನಿರ್ಮಿಸಿದನು. ಅವುಗಳಲ್ಲಿ ಪ್ರಮುಖವಾದ ನಾಲ್ಕು ಗೋಪುರಗಳನ್ನು ಈಗಿನ ಈ ಸ್ಥಳಗಳಲ್ಲಿ ಕಾಣಬಹುದಾಗಿದೆ.
- ಲಾಲಭಾಗ್
- ಕೆಂಪಾಂಬುಧಿ ಕೆರೆ
- ಅಲಸೂರು ಕೆರೆ
- ಮೇಖ್ರಿ ವೃತ್ತ