Close

ಕೆಲಸ ಮಾಡುವ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಯಲು ಜಿಲ್ಲಾ ಮಟ್ಟದ ಸಮಿತಿ

ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇದಿಸುವಿಕೆ, ನಿವಾರಿಸುವಿಕೆ) 2013ರ ಕಾಯ್ದೆ

ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇದಿಸುವಿಕೆ, ನಿವಾರಿಸುವಿಕೆ) 2013 ರ ಅಧಿನಿಯಮವನ್ನು ದಿನಾಂಕ:09-12-2023 ರಂದು ಜಾರಿಗೆ ತರಲಾಗಿದೆ. ಮಹಿಳೆಯರಿಗೆ ಕೆಲಸದ ಸ್ಥಳದಲ್ಲಿ ಸುರಕ್ಷಿತ ವಾತಾವರಣವನ್ನು ಕಲ್ಪಿಸುವುದೇ ಈ ಕಾಯ್ದೆಯ ಮುಖ್ಯ ಉದ್ದೇಶವಾಗಿದೆ ಹಾಗೂ ಕಾಯ್ದೆಯ ನಿಯಮ(4) (1)ರಂತೆ ಯಾವುದೇ ಕಛೇರಿ ಅಥವಾ ಸಂಸ್ಥೆ ಕೆಲಸದ ಸ್ಥಳಗಳಲ್ಲಿ 10 ಮತ್ತು 10 ಕ್ಕಿಂತ ಹೆಚ್ಚು ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿದ್ದರೆ ಕೆಲಸದ ಸ್ಥಳ/ ಕಛೇರಿಯಲ್ಲಿ ಆಂತರಿಕ ದೂರು ನಿವಾರಣಾ ಸಮಿತಿಯನ್ನು ಕಡ್ಡಾಯವಾಗಿ ರಚನೆಯನ್ನು ಮಾಡಬೇಕಾಗಿದೆ.

ಕಾಯ್ದೆಯ ಸೆಕ್ಷ್ನನ (5) ರಲ್ಲಿ ಪ್ರತ್ಯಾಯೋಜಿಸಿದ ಅಧಿಕಾರ ಚಲಾಯಿಸಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳನ್ನು ಈ ಅಧಿನಿಯಮದ ಮೇರೆಗೆ ಅಧಿಕಾರವನ್ನು ಚಲಾಯಿಸಲು ಅಥವಾ ಪ್ರಕಾರ್ಯಗಳನ್ನು ನಿರ್ವಹಿಸಲು ಪ್ರತಿಯೊಂದು ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.

ಮುಂದುವರೆದು, ಜಿಲ್ಲಾ ಮಟ್ಟದಲ್ಲಿ ಸ್ವೀಕೃತ ದೂರುಗಳ ವಿಲೇವಾರಿಗಾಗಿ “ಸ್ಥಳೀಯ ದೂರು ನಿರ್ವಹಣಾ ಸಮಿತಿಯನ್ನು ರಚಿಸಲಾಗಿದೆ.ಹಾಗೂ ತಾಲ್ಲೂಕು ಮಟ್ಟದಲ್ಲಿ ನೋಡೆಲ್‌ ಅಧಿಕಾರಿಗಳನ್ನು ಸಹ ನೇಮಿಸಲಾಗಿದೆ”.

ಇಲ್ಲಿ ಕ್ಲಿಕ್ ಮಾಡಿ