ಬನ್ನೇರುಘಟ್ಟ
ಬನ್ನೇರುಘಟ್ಟದ ಅರಣ್ಯ ಪ್ರದೇಶದ ಮುಖ್ಯ ಆಕರ್ಷಣೆಯೇ ಅಲ್ಲಿರುವ ಹುಲಿ ಮತ್ತು ಸಿಂಹಗಳು. ಪ್ರಕೃತಿಯ ಮಡಿಲಲ್ಲಿ ಸಿಂಹಗಳನ್ನು ನೋಡಬಹುದಾದ ಭಾರತದ ಕೆಲವೇ ಪ್ರದೇಶಗಳಲ್ಲಿ ಇದೂ ಒಂದಾಗಿದೆ. ಅರಣ್ಯ ಇಲಾಖೆಯು ಸಿಂಹ ಮತ್ತು ಹುಲಿಗಳ ವೀಕ್ಷಣೆಗಾಗಿ ಸಫಾರಿ ವ್ಯವಸ್ಥೆ ಕಲ್ಪಿಸಿದೆ. ಸಿಂಹಗಳ ಘರ್ಜನೆ ಕೇಳುವುದರೊಂದಿಗೆ ಇತರ ಪ್ರಾಣಿಗಳನ್ನೂ ನೋಡುವ ಸೌಭಾಗ್ಯ ಸಫಾರಿ ಮಾಡುವ ಪ್ರವಾಸಿಗರಿಗೆ ಇಲ್ಲಿ ಸಿಗುವುದು. 25 ಸಾವಿರ ಎಕರೆ ಪ್ರದೇಶದಷ್ಟು ವಿಸ್ತಾರ ಹೊಂದಿರುವ ಈ ಮೀಸಲು ಪ್ರದೇಶ ಹುಲಿ, ಸಿಂಹ, ಚಿರತೆ, ಕಾಡುಕೋಣ, ಜಿಂಕೆ, ಕರಡಿಗಳು, ಪಕ್ಷಿಗಳು ಮತ್ತು ವಿವಿಧ ಜಾತಿಯ ಚಿಟ್ಟೆಗಳ ನೆಲೆಯಾಗಿದೆ. ಈ ಉದ್ಯಾನವನದ ಮುಖ್ಯ ಆಕರ್ಷಣೆ ಎಂದರೆ ದೇಶದಲ್ಲೇ ಮೊಟ್ಟ ಮೊದಲನೇಯದಾದ ಚಿಟ್ಟೆಗೆಂದೇ ಇರುವ ಉದ್ಯಾನವನ. 7.5 ಎಕರೆ ವಿಸ್ತೀರ್ಣದಲ್ಲಿ ವಿಶೇಷವೆನ್ನಿಸುವ ಈ ಚಿಟ್ಟೆ ಉದ್ಯಾನವನವನ್ನು ಕೇಂದ್ರ ಸಚಿವ ಕಪಿಲ ಸಿಬಲ್ 2006 ರಲ್ಲಿ ಉದ್ಘಾಟಿಸಿದ್ದಾರೆ. ಚಿಟ್ಟೆಗಳ ಆಕರ್ಷಣೆಗೆಂದೇ ಈ ಪ್ರದೇಶದಲ್ಲಿ ವಿಶಿಷ್ಟ ಉಷ್ಣವಲಯದ ಪರಿಸರ ರೂಪುಗೊಳ್ಳಲೆಂದು ವಿವಿಧ ಜಾತಿಯ ಸಸ್ಯಗಳನ್ನು ನೆಡಲಾಗಿದೆ. ಸುಮಾರು 20 ರೀತಿಯ ವಿವಿಧ ಜಾತಿಯ ಚಿಟ್ಟೆಗಳನ್ನು ಇಲ್ಲಿ ನಾವು ಕಾಣಬಹುದು.
ಸಂದರ್ಶನದ ಸಮಯ :-
ಪ್ರತಿ ಮಂಗಳವಾರ ರಜೆ
ಝೂ ಟೈಮಿಂಗ್ಸ್: -9: 30 ರಿಂದ 5:00 ಕ್ಕೆ
ಸಫಾರಿ ಟೈಮಿಂಗ್ಗಳು: -10: 00am ರಿಂದ 4:30 ಕ್ಕೆ