Close

ಶ್ರೀ ರಾಮ ನವಮಿ

ಶ್ರೀ- ರಾಮ ನವಮಿ
  • Celebrated on/during: April
  • Significance:

    ಶ್ರೀ ರಾಮನವಮಿ ಹಿಂದೂ ದೇವರಾದ ರಾಮನ ಹುಟ್ಟಿದ ದಿನ. ಶ್ರೀ ರಾಮ ರಾಮಾಯಣದ ಕಥಾ ನಾಯಕ ಹಾಗೂ ಆದಿಕಾಲದ ಭಾರತದ ಅಯೋಧ್ಯೆಯ ರಾಜ. ದಶರಥ ಮಹಾ ರಾಜ ಶ್ರೀ ರಾಮನ ತಂದೆ. ಹಿಂದೂ ಸಂಪ್ರದಾಯದಲ್ಲಿ ರಾಮನನ್ನು ವಿಷ್ಣುವಿನ ಅವತಾರವಾಗಿ ಪೂಜಿಸಲಾಗುತ್ತದೆ. ಉತ್ಸವದ ಮಹತ್ವವು ದುಷ್ಟರ ಮೇಲೆ ಒಳ್ಳೆಯತನದ ವಿಜಯ , ಅಧರ್ಮವನ್ನು ಸೋಲಿಸಿ ಧರ್ಮದ ಸ್ಥಾಪನೆಯನ್ನು ಮಾಡಿದ ಕಾರ್ಯವನ್ನು ಸೂಚಿಸುತ್ತದೆ. ಶ್ರಿರಾಮನನ್ನು ಸೂರ್ಯದೇವನ ಪೂರ್ವಜನೆಂದೂ ಜನ ನಂಬುತ್ತಾರೆ. ಶ್ರೀ ರಾಮನವಮಿ ಯುಗಾದಿಯ ಎಂಟು ದಿನಗಳ ನಂತರ ಚೈತ್ರ ಮಾಸದ ಶುಕ್ಲ ಪಕ್ಷದಲ್ಲಿ ಆಚರಿಸಲಾಗುತ್ತದೆ.ರಾಮನವಮಿಯಂದು ದಕ್ಷಿಣ ಭಾರತದ ಮನೆಗಳಲ್ಲಿ, ಮುಖ್ಯವಾಗಿ ಕರ್ನಾಟಕದಲ್ಲಿ, ಪಾನಕ ಹಾಗೂ ಕೋಸಂಬರಿಗಳನ್ನು ಬಂದವರಿಗೆ ನೀಡಿ ಆಚರಿಸಲಾಗುತ್ತದೆ. ರಾಮ ಮಂದಿರಗಳಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಲಾಗುತ್ತದೆ