Close

ಕಳ್ಳೆ ಕಾಯಿ ಪರಿಷೆ

ಕಳ್ಳೆ ಕಾಯಿ ಪರಿಷೆ
  • Celebrated on/during: December
  • Significance:

    ಪ್ರತಿವರ್ಷದಂತೆ ವರ್ಷ, ಕಾರ್ತೀಕ ಮಾಸದ ಕೊನೆಯ ಸೋಮವಾರ, ಸುಂಕೇನ ಹಳ್ಳಿ ಎಂದು ಕರೆಯಲಾಗುತ್ತಿದ್ದ, ಬೆಂಗಳೂರಿನ ಬಸವನಗುಡಿಯಲ್ಲಿ ಪಾರಂಪಾರಿಕ ಕಡಲೆಕಾಯಿ ಪರಿಷೆ ನಡೆಯುತ್ತದೆ.
    ಬಸವನಗುಡಿಯ ಬೃಹತ್ ದೇವಲಯದಲ್ಲಿ ವಿಶೇಷಪೂಜೆ ಹಾಗೂ ಹೂವಿನ ಅಲಂಕಾರವನ್ನು ಮಾಡಿ, ಭಕ್ತರಿಗೆಲ್ಲಾ ಉಚಿತವಾಗಿ ಕಡಲೆಕಾಯಿಯನ್ನು ಪ್ರಸಾದವಾಗಿ ನೀಡಲಾಗುವದು. ಭಕ್ತರು, ದೇಗುಲದ
    ಪ್ರಾಂಗಣದಲ್ಲೆ ಕಡಲೆಕಾಯಿ ಪ್ರಸಾದವನ್ನು ಸೇವಿಸಬೇಕೆಂಬ ನಂಬಿಕೆ ಜನರಿಗಿದೆ. ಇದಕ್ಕೆ ಮೊದಲು, ದೇವಾಲಯದ ಮುಂದೆ ವಿಶೇಷವಾಗಿ ನಿರ್ಮಿಸಿದ್ದ ಪೆಂಡಾಲಿನಲ್ಲಿ ಕಡಲೆಕಾಯಿಯನ್ನು ತಕ್ಕಡಿಯಲ್ಲಿ
    ಸಾಂಕೇತಿಕವಾಗಿ ತೂಕಮಾಡಿ, ಭಕ್ತರಿಗೆಲ್ಲಾ ಹಂಚಲಾಗುವದು. ಐ.ಟಿ ಕ್ಷೇತ್ರದಲ್ಲಿ ಮಂಚೂಣಿಯಲ್ಲಿದ್ದರೂ, ಬೆಂಗಳೂರಿನ ಜನ ಇನ್ನೂ ತಮ್ಮ ಸಂಪ್ರದಾಯ ಪೂಜೆ-ಪುನಸ್ಕಾರಗಳನ್ನು ತಪ್ಪದೆ, ಅದ್ಧೂರಿಯಾಗಿ
    ನಡೆಸಿಕೊಂಡುಹೋಗುತ್ತಿದ್ದಾರೆ