Close

ಕರಗ

ಕರಗ
  • Celebrated on/during: April
  • Significance:

    ಕರಗ ಆಚರಣೆಯ ಮೂಲವನ್ನು ಹೇಳುವ ಒಂದು ಐತಿಹ್ಯ ಹೀಗಿದೆ: ಕುರುಕ್ಷೇತ್ರ ಸಮರದ ನಂತರ ಪಾಂಡವರು ಸ್ವರ್ಗಾರೋಹಣ ಮಾಡುವ ಸಂದರ್ಭದಲ್ಲಿ ದ್ರೌಪದಿ ಮಾರ್ಛಿತಳಾಗಿ ಬಿದ್ದಳಂತೆ. ದ್ರೌಪದಿ ಮೂರ್ಛಿತಳಾಗಿ ಬಿದ್ದದ್ದು ಪಾಂಡವರಿಗೆ ತಿಳಿಯದೆ ಮುಂದೆ ನಡೆಯುತ್ತಾರೆ. ಆಕೆಗೆ ಎಚ್ಚರ ಬಂದು ನೋಡಿದಾಗ ತಿಮಿರಾಸುರ ಎಂಬ ರಾಕ್ಷಸ ದೂರದಲ್ಲಿ ನಿಂತಿದ್ದ. ಆಗ ದ್ರೌಪದಿ ಆದಿಶಕ್ತಿಯ ರೂಪವನ್ನು ತೋರುತ್ತಾ ತಿಮರಾಸುರನನ್ನು ಸದೆ ಬಡಿಯಲು, ತನ್ನ ತಲೆಯಿಂದ ‘ಯಜಮಾನ’ರನ್ನು, ಹಣೆಯಿಂದ ‘ಗಣಾಚಾರಿ’ಗಳನ್ನು, ಕಿವಿಗಳಿಂದ ‘ಗೌಡ’ರನ್ನು, ಬಾಯಿಯಿಂದ ‘ಗಂಟೆಪೂಜಾರಿ’ಗಳನ್ನು ಮತ್ತು ಹೆಗಲಿನಿಂದ ‘ವೀರಕುಮಾರ’ರನ್ನು ಸೃಷ್ಥಿ ಮಾಡುತ್ತಾಳೆ. ಹೀಗೆ ಹುಟ್ಟಿದ ಇವರೆಲ್ಲರೂ ಸೇರಿ ಆ ರಕ್ಕಸನ ಎದಿರು ಹೋರಾಡಿ ಗೆಲ್ಲುತ್ತಾರೆ. ಹೀಗೆ ಮಕ್ಕಳನ್ನು ಹುಟ್ಟಿಸಿದ ದ್ರೌಪದಿ ಆದಿಶಕ್ತಿಯಾಗಿ, ಮತ್ತೆ ಭೂಮಿಗೆ ಮರಳಿ ಬಾರದಂತೆ ಕೈಲಾಸಕ್ಕೆ ಹೋಗುವುದು ಮಕ್ಕಳಿಗೆ ದುಗುಡ ಉಂಟು ಮಾಡುತ್ತದೆ. ಅವಳು ಹೋಗದಂತೆ ಬೇಡಿಕೊಳ್ಳಲು ಕೃಷ್ಣನು ಅವರಿಗೆ, ತಾಯಿಯನ್ನು ಹೋಗದಂತೆ ತಡೆಯಲು ತಮ್ಮ ಕೈಯಲ್ಲಿರುವ ಕತ್ತಿಯಿಂದ ತಮ್ಮ ಎದೆಗೆ ತಿವಿದುಕೊಳ್ಳುತ್ತಾ (ಇದನ್ನು ಕರಗ ಹಬ್ಬದಲ್ಲಿ ‘ಅಲಗುಸೇವೆ’ ಎನ್ನುತ್ತಾರೆ) “ನಮಗೆ ನೀನಲ್ಲದೆ ಇನ್ಯಾರು ದಿಕ್ಕು, ಹೋಗದಿರು” ಎಂದು ಅಲವತ್ತು ಕೊಳ್ಳಲು ಹೇಳುವನು. ಇದನ್ನು ನೋಡಿ ದ್ರೌಪದಿಗೆ ಮರುಕವಾಗಿ ಪ್ರತಿ ವರುಷವೂ ಮೂರು ದಿನ ಭೂಮಿಗೆ ಬಂದು ಮಕ್ಕಳೊಂದಿಗೆ ಇರುವ ಮಾತು ನೀಡುತ್ತಾಳೆ. ಆ ಮೂರು ದಿನಗಳೇ ಕರಗ ಹಬ್ಬದ ದಿನಗಳು. ಇದರ ನೆನಪಿಗೆ ಕರಗ ನಡೆಯುತ್ತದೆಂದು ಹೇಳಲಾಗಿದೆ. ಇದರ ಜೊತೆಗೆ ಇನ್ನೊಂದು ಐತಿಹ್ಯವಿದೆ. ದ್ವಾಪರ ಯುಗದಲ್ಲಿ, ಒಂದು ಸರ್ವಾಲಂಕಾರ ಭೂಷಿತೆಯಾದ ದ್ರೌಪದಿ ಮಂಗಳ ಕಲಶವನ್ನು ಹಿಡಿದು ಸ್ವಯಂವರ ಮಂಟಪವನ್ನು ಪ್ರವೇಶಿಸಿದಳು. ಮತ್ಸ್ಯವನ್ನು ಭೇದಿಸುವ ಅರ್ಜುನನ್ನೂ, ಕುಂತಿಯ ಅಭಿಲಾಷೆಯಂತೆ ಉಳಿದ ನಾಲ್ವರು ಪಾಂಡವ ಸಹೋದರರನ್ನೂ ಶಾಸ್ತ್ರೋಸ್ತವಾಗಿ ವಿವಾಹವಾದಳು. ಆಗ ಸಂತೋಷದಿಂದ ಕೈಯಲಿದ್ದ ಕಲಶವನ್ನು ಶಿರದಲ್ಲಿ ಧರಿಸಿದಳು. ಅದೇ ಕರಗವಾಯಿತು ಎಂಬ ನಂಬಿಕೆಯೂ ಇದೆ