Close

ಯುಗಾದಿ

ಯುಗಾದಿ
  • Celebrated on/during: April
  • Significance:

    ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ.
    “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು.
    ಯುಗಾದಿಯ ದಿನ ಸುಖದ ಸಂಕೇತವಾದ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು. ತಿಂದ ಮೇಲೆ ಬೆಲ್ಲವು ಹೊಟ್ಟೆಯೊಳಗೆ ಉರಿಯ ಅಥವಾ ಶಾಖವನ್ನು ಉಂಟು ಮಾಡಿದರೆ
    ಬೇವು ಆ ಉರಿಯ ಶಮನಕಾರಿ. ಬೇವು – ಬೆಲ್ಲದ ಮಿಶ್ರಣವನ್ನು ತಿನ್ನುವಾಗ ಹೇಳುವ ಒಂದು ಶ್ಲೋಕ ಹೀಗಿದೆ:

    ಶತಾಯು: ವಜ್ರದೇಹಾಯ ಸರ್ವಸಂಪತ್ಕರಾಯಚ|
    ಸರ್ವಾರಿಷ್ಟ ವಿನಾಶಾಯ ನಿಂಬಕಂದಳ ಭಕ್ಷಣಂ|| – ಅದರರ್ಥ ಹೀಗಿದೆ – ನೂರು ವರುಷಗಳ ಆಯುಷ್ಯ, ಸದೃಢ ಆರೋಗ್ಯ, ಸಕಲ ಸಂಪತ್ತುಗಳ ಪ್ರಾಪ್ತಿಗಾಗಿಯೂ, ಸಕಲ ಅರಿಷ್ಟ ನಿವಾರಣೆಗಾಗಿಯೂ ಬೇವು ಬೆಲ್ಲ ಸೇವನೆ ಮಾಡುತ್ತೇನೆ