Close

ಶಕ್ತಿ ಯೋಜನೆ

ದಿನಾಂಕ : 11/06/2023 - |

ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಕರ್ನಾಟಕ ರಸ್ತೆ ಸಾರಿಗೆ ನಗರ ಸಾರಿಗೆ ಸಂಸ್ಥೆ/ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ/ಕಲ್ಯಾಣ ಸಂಬಂಧ “ಶಕ್ತಿ ಯೋಜನೆಯನ್ನು ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣ

ಈ ಯೋಜನೆಯ ಮುಖ್ಯ ಅಂಶಗಳು ಈ ಕೆಳಕಂಡಂತಿವೆ:
1. ಉಚಿತ ಕರ್ನಾಟಕ ಪ್ರಯಾಣ ರಾಜ್ಯದ(Domicile of Karnataka) ಮಹಿಳೆಯರಿಗೆ (ವಿದ್ಯಾರ್ಥಿನಿಯರು ಸೇರಿದಂತೆ) ಮಾತ್ರ ಸೌಲಭ್ಯ ಅನ್ವಯಿಸುತ್ತದೆ. ಈ ಮಹಿಳಾ ಪ್ರಯಾಣಿಕರ ಪೈಕಿ 6 ವರ್ಷದಿಂದ 12 ಬಾಲಕಿಯರು ಮತ್ತು ಲಿಂಗತ ಅಲ್ಪಸಂಖ್ಯಾತರು ಸಹ ಒಳಗೊಂಡಿರುತ್ತಾರೆ.

2. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಗರ ಸಾರಿಗೆ/ಸಾಮಾನ್ಯ ಮತ್ತು ವೇಗದೂತ (ತಡೆರಹಿತ ರಾಜ್ಯಾದ್ಯಂತಒಳಗೊಂಡಂತೆ) ಸಾರಿಗೆಗಳಲ್ಲಿ ಮಾತ್ರ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

3. ಐಷಾರಾಮಿ ಬಸ್‌ಗಳಾದ ರಾಜಹಂಸ, ನಾನ್ ಎ.ಸಿ. ಸ್ತ್ರೀಪರ್, ಎ.ಸಿ. ಸ್ತ್ರೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಅಂಬಾರಿ, ಅಂಬಾರಿ ಡೀಮ್ ಕ್ಲಾಸ್, ಅಂಬಾರಿ ಉತ್ಸವ್, ಫೈ ಬಸ್, ಇವಿ ಪ್ಲಸ್ ಸಾರಿಗೆಗಳಲ್ಲಿ ಸೌಲಭ್ಯವು ಅನ್ವಯಿಸುವುದಿಲ್ಲ.

4. ಮಹಿಳಾ ಪ್ರಯಾಣಿಕರಿಗೆ ಪ್ರಯಾಣ ದೂರದ ಯಾವುದೇ ಮಿತಿ ಇರುವುದಿಲ್ಲ. ಈ ಪ್ರಯಾಣ ಸೌಲಭ್ಯವು ರಾಜ್ಯದ ಒಳಗೆ ಪ್ರಯಾಣಿಸಲು ಮಾತ್ರ ಅನ್ವಯವಾಗುತ್ತದೆ.

5. ಕೆಲವು ಆಯ್ದ ಅಂತರ ರಾಜ್ಯ ಪ್ರಯಾಣಿಸಲು ಹೊರತುಪಡಿಸಿ ಉಳಿದ ಅಂತರರಾಜ್ಯ ಸಾರಿಗೆಗಳಲ್ಲಿ ಮಹಿಳೆಯರು ಉಚಿತವಾಗಿ ಅವಕಾಶವಿರುವುದಿಲ್ಲ.

6. ಶಕ್ತಿ ಯೋಜನೆಯು ದೈನಿಕ ಪಾಸು, ಮಾಸಿಕ ಪಾಸು, ಸಾಂದರ್ಭಿಕ ಒಪ್ಪಂದ ಹಾಗೂ ಖಾಯಂಗುತ್ತಿಗೆ (chartered service), ಪ್ಯಾಕೇಜ್ ಮುಂತಾದ ಸೇವೆಗಳಿಗೆ ಅನ್ವಯಿಸುವುದಿಲ್ಲ.

ಫಲಾನುಭವಿ:

ಮಹಿಳೆಯರಿಗೆ (ವಿದ್ಯಾರ್ಥಿನಿಯರು ಸೇರಿದಂತೆ) ಮಾತ್ರ

ಪ್ರಯೋಜನಗಳು:

ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಕರ್ನಾಟಕ ರಸ್ತೆ ಸಾರಿಗೆ ನಗರ ಸಾರಿಗೆ ಸಂಸ್ಥೆ/ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ/ಕಲ್ಯಾಣ ಸಂಬಂಧ “ಶಕ್ತಿ ಯೋಜನೆಯನ್ನು ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣ

ಅರ್ಜಿ ಸಲ್ಲಿಸುವ ವಿಧಾನ

ಈ ಕೆಳಕಂಡ ಯಾವುದಾದರೂ ಒಂದು ಮೂಲ ಗುರುತಿನ ಚೀಟಿ ಅಥವಾ ಡಿಜಿಲಾಕರ್ (Digilocker) ಮುಖಾಂತರ ಹಾಜರುಪಡಿಸಬೇಕಾಗಿರುತ್ತದೆ:
————————————————————
ಆಧಾರ್ ಕಾರ್ಡ್,
ಚುನಾವಣಾ ಆಯೋಗ ವಿತರಿಸಿರುವ ಮತದಾರರ ಗುರುತಿನ ಚೀಟಿ,
ಚಾಲನಾ ಪರವಾನಗಿ ಪತ್ರ (Driving licence),
ವಾಸಸ್ಥಳ ನಮೂದಿಸಿರುವ ಭಾರತ ಸರ್ಕಾರದ ಇಲಾಖೆಗಳು/ಭಾರತ ಸರ್ಕಾರದ ಸಾರ್ವಜನಿಕ ವಲಯದ ಉದ್ದಿಮೆ/ಸಂಸ್ಥೆಗಳು(PSU’s) ವಿತರಿಸಿರುವ ಗುರುತಿನ ಚೀಟಿ,
ವಾಸಸ್ಥಳ ನಮೂದಿಸಿರುವಂತಹ ಕರ್ನಾಟಕ ಸರ್ಕಾರದ ಇಲಾಖೆಗಳು/ಕರ್ನಾಟಕ ಸರ್ಕಾರದ ಸಾರ್ವಜನಿಕ ವಲಯದ ಉದ್ದಿಮೆ/ಸಂಸ್ಥೆಗಳು ವಿತರಿಸಿರುವ ಗುರುತಿನ ಚೀಟಿ
ಕರ್ನಾಟಕ ಸರ್ಕಾರದ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ನಿರ್ದೇಶನಾಲಯದವರು ವಿತರಿಸಿರುವ ಗುರುತಿನ ಚೀಟಿ,