Close

ದೊಡ್ಡ ಆಲದ ಮರ

  • ದೊಡ್ಡ ಆಲದ ಮರ
  • ದೊಡ್ಡ ಆಲದ -ಮರ

ದೊಡ್ಡ ಆಲದ ಮರ ಬೆಂಗಳೂರಿನಿಂದ 28 ಕಿ.ಮೀ. ದೂರವಿರುವ . ಬೆಂಗಳೂರು ದಕ್ಷಿಣ ತಾಲ್ಲೂಕಿನ ಕೇತೋಹಳ್ಳಿ 3 ಎಕರೆಯಲ್ಲಿ ಇಡೀ ಭಾರತದ ಪುರಾತನ ಆಲದ ಮರಗಳಲ್ಲೇ ನಾಲ್ಕನೆಯ ಸ್ಥಾನ ಹೊಂದಿರುವ ಪುರಾತನ ಆಲದ ಮರವಾಗಿದೆ. 400 ವರ್ಷಗಳಷ್ಟು ವಯಸ್ಸಾಗಿರುವ ಈ ವಿರಳ ಆಲದ ಮರಕ್ಕೆ ಇಡೀ ಭಾರತದ ಪುರಾತನ ಆಲದ ಮರಗಳಲ್ಲೇ ನಾಲ್ಕನೆಯ ಸ್ಥಾನ.ಆಂಧ್ರಪ್ರದೇಶದ ಮೆಹಬೂಬ್ ನಗರ, ಪಶ್ಚಿಮ ಬಂಗಾಳದ ಕೊಲ್ಕತ್ತ ಹಾಗೂ ತಮಿಳುನಾಡಿನ ಚೆನ್ನೈನಲ್ಲ್ಲಿ ಕ್ರಮವಾಗಿ ಮೊದಲ ಮೂರು ದೈತ್ಯ ಆಲದ ಮರಗಳಿವೆ.ಆಲದ ಮರದ ಎತ್ತರ 95 ಅಡಿ. ಕೊಂಬೆಗಳು. ದೈತ್ಯ ಮರ ನಾಲ್ಕು 3 ಎಕರೆಯಲ್ಲಿ ಆವರಿಸಿದೆ. ಜೋಲಾಡುವ ಸಾವಿರಾರು ಬೇರುಗಳದ್ದೇ ವಿಶಿಷ್ಟ ಆಕರ್ಷಣೆ. ಅವುಗಳ ಒಂದು ಭಾಗವನ್ನೇ ಚಚರವಾಗಿಸಿಕೊಂಡ ಮುನೇಶ್ವರ ಸ್ವಾಮಿ ದೇವಾಲಯ. ಹೆಮ್ಮರ ವೀಕ್ಷಿಸಲು ಬರುವವರು ದಣಿವಾರಿಸಿಕೊಳ್ಳಲು ಕಲ್ಲು ಬೆಂಚುಗಳು ಇವೆ. . 20000ರಲ್ಲಿ ಮರದ ಮುಖ್ಯ ಕಾಂಡವು ರೋಗಕ್ಕೆ ತುತ್ತಾಗಿ ನಶಿಸಿತು. ಮರ ಅನೇಕ ಕೊಂಬೆಗಳ ಪೋಷಣೆಯಿಂದ ವೇಗವಾಗಿ, ಅಷ್ಟೇ ಬಲಿಷ್ಠವಾಗಿ ಬೆಳೆಯುತ್ತಿದೆ. ಕೊಂಬೆಗಳು ನಿರಂತರ ಜಟೆಯಂತೆ ಬೇರು ಅರ್ಥಾತ್ ಬಿಳಲುಗಳನ್ನು ನೆಲದಾಳಕ್ಕೆ ಇಳಿಬಿಟ್ಟಿವೆ .

ಸಂರಕ್ಷಣೆಯ ಹೊಣೆ:ಕರ್ನಾಟಕ ರಾಜ್ಯ ಸರ್ಕಾರದ ತೋಟಗಾರಿಕೆ ಇಲಾಖೆಯು ಆಲದ ಮರದ ಸಂರಕ್ಷಣೆಯ ಹೊಣೆ ವಹಿಸಿಕೊಂಡಿದೆ. ನಾಲ್ಕು ಎಕರೆ ಪ್ರದೇಶಕ್ಕೆ ಸುತ್ತ ಕಬ್ಬಿಣದ ಗ್ರಿಲ್ ಹಾಕಲಾಗಿದೆ. ಪ್ರವಾಸೋದ್ಯಮ ಇಲಾಖೆ ದೊಡ್ಡ ಆಲದ ಮರವನ್ನು ಪಾರಂಪರಿಕ ವೃಕ್ಷವೆಂದು ಘೋಷಿಸಿ ತಾಣವನ್ನು ಪ್ರವಾಸಿ ಕೇಂದ್ರವೆಂದು ಸಾರಿದೆ. ಕೇಂದ್ರ ಸರ್ಕಾರಕ್ಕೂ ಪ್ರದೇಶವನ್ನು ಸರ್ವತೋಮುಖ ಅಭಿವೃದ್ಧಿಗೆ ಪರಿಗಣಿಸಬೇಕೆಂದು ಶಿಫಾರಸು ಮಾಡಿದೆ.ಕುಡಿಯುವ ನೀರಿನ ವ್ಯವಸ್ಥೆಯಿದೆ. ಕೋತಿಗಳ ಕಾಟ ಜೋರಾಗಿ ಇದೆ.

ಬಸ್ ಸೇವೆ:ಕೆಂಪೇಗೌಡ ಬಸ್ ನಿಲ್ದಾಣ, ಕೃಷ್ಣರಾಜ ಮಾರ್ಕೆಟ್ನಿಂದ ನೇರವಾಗಿ ಈ ಪ್ರೇಕ್ಷಣೀಯ ಸ್ಥಳಕ್ಕೊಯ್ಯುವ ಬಿಎಂಟಿಸಿ ಬಸ್ಸುಗಳಿವೆ.

ಸಂದರ್ಶನದ ಸಮಯ :
ಎಲ್ಲಾ ದಿನಗಳು ಬೆಳಗ್ಗೆ 7:00 ರಿಂದ ಸಂಜೆ 6:00 ಗಂಟೆಗೆ ತನಕ 

ತಲುಪುವ ಬಗೆ :

ವಿಮಾನದಲ್ಲಿ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ 63 ಕಿಮೀ

ರೈಲಿನಿಂದ

ಬೆಂಗಳೂರು ನಗರ ರೈಲು ನಿಲ್ದಾಣದಿಂದ -32 ಕಿಮೀ

ರಸ್ತೆ ಮೂಲಕ

ಕೆಂಪೇಗೌಡ ಬಸ್ ನಿಲ್ದಾಣದಿಂದ (ಮೆಜೆಸ್ಟಿಕ್) -31 ಕಿಮೀ